ಬೆಂಗಳೂರಿನಲ್ಲಿ ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ; ಮೂವರು ವಶ
ಸಿಸಿಬಿ ಮತ್ತು ಉಪ್ಪಾರಪೇಟೆ ಠಾಣೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ, ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಐಟಿಸಿ ಕಂಪನಿಯ ಪ್ರತಿನಿಧಿ ಅನ್ವೇಶ್ ಅವರ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದೆ. ಮೊದಲ ಪ್ರಕರಣದಲ್ಲಿ 2 ಟ್ರಾಲಿ ಬ್ಯಾಗ್ಗಳಲ್ಲಿ ನಕಲಿ ಸಿಗರೇಟ್ಗಳನ್ನು ತುಂಬಿ ಕೇರಳಂಗೆ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮಹಮದ್ ರಿಯಾಜ್ ಮತ್ತು ಕುಮಾರನ್ ಎಂಬವರನ್ನು ಬಂಧಿಸಿ, ₹20 ಲಕ್ಷ ಮೌಲ್ಯದ ನಕಲಿ ಸಿಗರೇಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಂದು ಪ್ರಕರಣದಲ್ಲಿ, ಉಪ್ಪಾರಪೇಟೆ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಮಹಮದ್ ಗುಲ್ಜಾರ್ ಎಂಬ ಆರೋಪಿಯನ್ನು ಬಂಧಿಸಿ, ₹10 ಲಕ್ಷ ಮೌಲ್ಯದ ನಕಲಿ ಸಿಗರೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಐಟಿಸಿ ಸಿಗರೇಟ್ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ಸಿಗರೇಟ್ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಜಾಲದ ಮೂಲ ಬೇರುಗಳನ್ನು ಪತ್ತೆ ಹಚ್ಚಲು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.