BLR Today
ಶನಿವಾರ, ನವೆಂಬರ್ 28, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru4 ಗಂಟೆಗಳ ಹಿಂದೆ

ದೇವನಹಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆ ಯತ್ನಿಸಿ ಗುಂಡೇಟು ನೀಡಿ ವಿಕೃತ ಕಾಮಿಯನ್ನು ಬಂಧಿಸಿದ ಪೊಲೀಸರು

ದೇವನಹಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆ ಯತ್ನಿಸಿ ಗುಂಡೇಟು ನೀಡಿ ವಿಕೃತ ಕಾಮಿಯನ್ನು ಬಂಧಿಸಿದ ಪೊಲೀಸರು
ಚಿತ್ರ: TV9 Kannada

ದೇವನಹಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆ ಯತ್ನಿಸಿ ಗುಂಡೇಟು ನೀಡಿ ವಿಕೃತ ಕಾಮಿಯನ್ನು ಬಂಧಿಸಿದ ಪೊಲೀಸರು

ದೇವನಹಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆ ಯತ್ನಿಸಿದ ಕಾರಣ ಗುಂಡಿನ ದಾಳಿ ನಡೆಸಿ ವಿಕೃತ ಕಾಮಿಯೋರ್ವನನ್ನು ಬಂಧಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ತರಹುಣಸೆಯ ಟೆರ್ರಾಫಾರಂ ಬಳಿ ಈ ಘಟನೆ ನಡೆದಿದೆ. ಆಂಧ್ರದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿ ನಿವಾಸಿ ಬೆಟ್ಟ ನರೇಶ್ ಎಂದು ಆರೋಪಿಸಲಾಗಿದೆ. ಪೊಲೀಸರು ನರೇಶ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಮಹಿಳೆಯರ ಜೊತೆ ಅಸಭ್ಯವಾಗಿ ವರ್ತನೆ ಮತ್ತು ಅತ್ಯಾಚಾರ ಯತ್ನ ಸೇರಿದಂತೆ ಆರೋಪಿ ವಿರುದ್ಧ 15ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದವು ಎಂದು ಮೂಲಗಳು ತಿಳಿಸಿವೆ. ಯಲಹಂಕ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದ ಸಂದರ್ಭದಲ್ಲಿ ಆರೋಪಿ ಮೊಂಡಾಟ ತೋರಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ವಾರ್ನಿಂಗ್ ನೀಡಿದರೂ ಎಚ್ಚೆತ್ತುಕೊಳ್ಳದ ಆರೋಪಿ ಅಟ್ಯಾಕ್ ಮಾಡಿ ಎಸ್ಕೇಪ್ ಯತ್ನಿಸಿದ್ದಾನೆ. ಹೀಗಾಗಿ ಆತ್ಮರಕ್ಷಣೆಯ ಅನಿವಾರ್ಯತೆಯಿಂದ ಚಿಕ್ಕಜಾಲ ಪೊಲೀಸ್ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್ ಅವರು ಫೈರಿಂಗ್ ಮಾಡಿದ್ದಾರೆ. ಆರೋಪಿ ಮತ್ತು ಗಾಯಗೊಂಡ ಪೊಲೀಸರಿಗೆ ಯಲಹಂಕ ಬಳಿಯ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCrimeDevanahalliYelahanka