ಹರಪನಹಳ್ಳಿ ಗೇಟ್-ಹುಲ್ಲಹಳ್ಳಿ ರಸ್ತೆಯಲ್ಲಿ ಗುಂಡಿಗಳು ವಾಹನ ಸವಾರರಿಗೆ ಅಪಾಯ
ಹರಪನಹಳ್ಳಿ ಗೇಟ್-ಹುಲ್ಲಹಳ್ಳಿ ರಸ್ತೆಯಲ್ಲಿ ಗುಂಡಿಗಳಿರುವ ಕಾರಣ ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಹಲವು ಗ್ರಾಮ ಹಾಗೂ ಅಪಾರ್ಟ್‌ಮೆಂಟ್‌ಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ವಾಹನ ಸವಾರರು ನಿತ್ಯ ಸರ್ಕಸ್ ಮಾಡುತ್ತಾ ಸಂಚರಿಸುತ್ತಿದ್ದಾರೆ. ಗುಂಡಿ ಬಿದ್ದು ತಿಂಗಳುಗಳೇ ಕಳೆದರೂ ಗುಂಡಿ ಮುಚ್ಚಲು ಯಾರು ಕ್ರಮವಹಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರಸ್ತೆಯ ದಟ್ಟಣೆಯಿಂದಾಗಿ ಅರ್ಧ ಕಿ.ಮೀ. ಸಾಗಲು 30-40 ನಿಮಿಷ ಹಿಡಿಯುತ್ತಿದೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruAnekalJiganiInfrastructureTraffic


