ಶಿಕ್ಷಕರಿಗೆ ಪ್ರಾಯೋಗಿಕ ತರಬೇತಿಯ ಅಗತ್ಯ ಹೆಚ್ಚಿದೆ - ಪ್ರೊ.ಬಿ.ಸುಬ್ಬಾರೆಡ್ಡಿ
ಕೃತಕ ಬುದ್ಧಿಮತ್ತೆಯ ತಾಂತ್ರಿಕ ಯುಗದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣದ ಜೊತೆಗೆ ಪ್ರಾಯೋಗಿಕ ತರಬೇತಿಗಳ ಅಗತ್ಯ ಹೆಚ್ಚಿದೆ ಎಂದು ಪ್ರತಿಭಾನ್ವೇಷಣೆ ಮತ್ತು ಕೌಶಲಾಭಿವೃದ್ಧಿ ಕೇಂದ್ರದ ಸಂಚಾಲಕ ಪ್ರೊ.ಬಿ.ಸುಬ್ಬಾರೆಡ್ಡಿ ಹೇಳಿದರು. ಕುದಾಪುರ ಐಐಎಸ್ಸಿ ಕ್ಯಾಂಪಸ್ನಲ್ಲಿ ಬುಧವಾರ ಕೇಂದ್ರೀಯ ವಿದ್ಯಾಲಯ ಮತ್ತು ವಸತಿಶಾಲಾ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ರಾಜ್ಯ ಕೌಶಲಾಭಿವೃದ್ಧಿ ಪ್ರಾಧಿಕಾರವು ಐಐಎಸ್ಸಿ, ಕೌಶಲಾಭಿವೃದ್ಧಿ ಕೇಂದ್ರ ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಸಹಯೋಗದಲ್ಲಿ ತಾಂತ್ರಿಕ ಕಾಲೇಜು ಬೋಧಕರಿಗೆ ಮೌಲ್ಯಾಧಾರಿತ ಮತ್ತು ಪ್ರಾಯೋಗಿಕ ತರಬೇತಿ ಕಾರ್ಯಗಾರದ ಆಯೋಜನೆಗೆ ಸಿದ್ಧತೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
educationBengaluruIIScSkill DevelopmentTraining


