BLR Today
ಭಾನುವಾರ, ಸೆಪ್ಟೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBengaluru3 ಗಂಟೆಗಳ ಹಿಂದೆ

ಈಡಿಗ ಸಂಘದಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಈಡಿಗ ಸಂಘದಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ
ಚಿತ್ರ: Prajavani

ಕರ್ನಾಟಕ ಪ್ರದೇಶ ಆರ್ಯ ಈಡಿಗ ಯುವ ಸಂಘದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಸೆ. 27ರಂದು ಬೆಳಗ್ಗೆ 10 ಗಂಟೆಗೆ ನಗರದ ಮಾಂಗಲ್ಯ ಕಲ್ಯಾಣ ಮಂದಿರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಯುವ ಸಂಘದ ಉಪಾಧ್ಯಕ್ಷ ಜೆ.ರಾಜೇಂದ್ರ ಉದ್ಘಾಟಿಸಲಿದ್ದಾರೆ. ಗೌರವಾಧ್ಯಕ್ಷ ಎನ್‌.ಸುನೀಲ್‌ ಕುಮಾರ್ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ. ಬೆಂಗಳೂರಿನ ಈಡಿಗರ ವಿದ್ಯಾರ್ಥಿ ನಿಲಯದ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಂ.ನಾಗರಾಜು ವಿದ್ಯಾರ್ಥಿ ವೇತನ ವಿತರಿಸಲಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruEediga SanghaPratibha PuraskarScholarship