BLR Today
ಶನಿವಾರ, ನವೆಂಬರ್ 28, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru2 ಗಂಟೆಗಳ ಹಿಂದೆ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಗುದ್ದಿದ ಖಾಸಗಿ ಎಲೆಕ್ಟ್ರಿಕ್ ಬಸ್; ಸಂಚಾರ ಅಸ್ತವ್ಯಸ್ತ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಗುದ್ದಿದ ಖಾಸಗಿ ಎಲೆಕ್ಟ್ರಿಕ್ ಬಸ್; ಸಂಚಾರ ಅಸ್ತವ್ಯಸ್ತ
ಚಿತ್ರ: TV9 Kannada

ಬೆಂಗಳೂರಿನ ರಾಜಾರಾಮ್ ಮೋಹನ್ ರಾಯ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಲೆಕ್ಟ್ರಿಕ್ ಬಸ್ ಡಿವೈಡರ್​ಗೆ ಗುದ್ದಿರುವ ಘಟನೆ ನಡೆದಿದೆ. ಬೆಳಗಿನಜಾವ 5.10ರ ಸುಮಾರಿಗೆ ಅಪಘಾತ ನಡೆದಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಿಂದಾಗಿ ಕಾರ್ಪೊರೇಷನ್ ಸಂಪರ್ಕಿಸುವ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್​ಜಾಮ್ ಉಂಟಾಗಿದ್ದು, ಕ್ರೇನ್ ಮೂಲಕ ಸಂಚಾರ ಪೊಲೀಸರು ಖಾಸಗಿ ಬಸ್​ ತೆರವುಗೊಳಿಸುವ ಕೆಲಸ ಮಾಡಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruAccidentTraffic