BLR Today
ಗುರುವಾರ, ನವೆಂಬರ್ 5, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru4 ಗಂಟೆಗಳ ಹಿಂದೆ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ
ಚಿತ್ರ: Prajavani

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದು, ಇಂಡಿಯಾ ಒಕ್ಕೂಟವು ಬೃಹತ್ ಪ್ರತಿಭಟನೆ ನಡೆಸುತ್ತಿದೆ. 'ಮತ ಉಳಿಸಿ, ದೇಶ ಉಳಿಸಿ' ಧ್ಯೇಯ ವಾಕ್ಯದಡಿ ಪ್ರತಿಭಟನೆ ನಡೆಯುತ್ತಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಸಚಿವ ಎಂ.ಬಿ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ, ಶಾಸಕ ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ಶಾಸಕರು, ಬಹುಭಾಷಾ ನಟ ಪ್ರಕಾಶ್ ರಾಜ್ ಭಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ಐದು ನಿರ್ಣಯಗಳ ಮಂಡನೆ ಅಕ್ರಮ ಹಾಗೂ ಪ್ರಜಾಪ್ರಭುತ್ವ ವಿರೋಧಿಯಾದ ಎಸ್‌ಐಆರ್ ಅನ್ನು ರದ್ದು ಮಾಡಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀಮೆ ನೀಡಬೇಕು, ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಕಾನೂನನ್ನು ರದ್ದು ಮಾಡಬೇಕು, ಸುಪ್ರೀಂಕೋರ್ಟ್ ಸೂಚನೆಯಂತೆ ನೇಮಕಾತಿಯ ಸ್ವಾಯತ್ತತೆಯನ್ನು ಖಾತ್ರಿಪಡಿಸಬೇಕು, ಕರ್ನಾಟಕ ಸರ್ಕಾರ ರಾಜ್ಯದ SIR ಅಂತಿಮ ಪಟ್ಟಿಯನ್ನು ತಿರಸ್ಕರಿಸಬೇಕು ಮತ್ತು ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಮುಂಬರುವ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು SIR ಪೂರ್ವ ಪಟ್ಟಿ ಆಧರಿಸಿ ನಡೆಸಲು ಕ್ರಮವಹಿಸಬೇಕು ಎಂದು ಬೇಡಿಕೆಗಳಾಗಿವೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruProtestPoliticsGyanesh KumarIndia Coalition