BLR Today
ಶನಿವಾರ, ಸೆಪ್ಟೆಂಬರ್ 26, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru2 ಗಂಟೆಗಳ ಹಿಂದೆ

ತಮಿಳುನಾಡಿಗೆ ನೀರು: ಬೆಂಗಳೂರಿನಲ್ಲಿ ರೈತರಿಂದ ರಸ್ತೆ ತಡೆ

ತಮಿಳುನಾಡಿಗೆ ನೀರು: ಬೆಂಗಳೂರಿನಲ್ಲಿ ರೈತರಿಂದ ರಸ್ತೆ ತಡೆ
ಚಿತ್ರ: Prajavani

ಕಾವೇರಿ ನೀರು ನಿಯಂತ್ರಣ ಮಂಡಳಿಯು ತಮಿಳುನಾಡಿಗೆ ಪ್ರತಿದಿನ 4 ಸಾವಿರ ಕ್ಯುಸೆಕ್‌ ನೀರು ಹರಿಸುವಂತೆ ಶಿಫಾರಸು ಮಾಡಿರುವುದನ್ನು ಖಂಡಿಸಿ ಕನ್ನಡ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘ, ಜೈ ಕರ್ನಾಟಕ ಪರಿಷತ್ ಕಾರ್ಯಕರ್ತರು ಶುಕ್ರವಾರ ಬೆಂಗಳೂರಿನ ಜೆ.ಸಿ.ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜಯಚಾಮರಾಜೇಂದ್ರ ವೃತ್ತದಲ್ಲಿ ಜಮಾವಣೆಗೊಂಡು ಕಾರ್ಯಕರ್ತರು ಬೆಂಗಳೂರು–ಮೈಸೂರು ಹಳೇ ಹೆದ್ದಾರಿ ಬಂದ್‌ ಮಾಡಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruProtestKaveri WaterKarnataka Politics