BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru12 ಗಂಟೆಗಳ ಹಿಂದೆ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮದ ಕುರಿತು ಬೆಂಗಳೂರಿನಲ್ಲಿ ಪ್ರತಿಭಟನೆ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮದ ಕುರಿತು ಬೆಂಗಳೂರಿನಲ್ಲಿ ಪ್ರತಿಭಟನೆ
ಚಿತ್ರ: Prajavani

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 2017ರಿಂದ 2024ರ ನಡುವೆ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಕರ್ನಾಟಕ ಭೋವಿ ವಡ್ಡರ ಸಂಘರ್ಷ ಸಮಿತಿ ಹಾಗೂ ಭೋವಿ ಸಮುದಾಯ ಸಂಘದ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು. 'ರಾಜ್ಯದ ಬಹುತೇಕ ತಾಲ್ಲೂಕುಗಳಲ್ಲಿ ಸಮುದಾಯದ ಕಡುಬಡವರು ವಾಸ ಮಾಡುತ್ತಿದ್ದಾರೆ. ಅವರ ಅಭಿವೃದ್ಧಿ ದೃಷ್ಟಿಯಿಂದ ಭೋವಿ ಅಭಿವೃದ್ಧಿ ನಿಗಮಕ್ಕೆ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕು' ಎಂದೂ ಆಗ್ರಹಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruProtestMisappropriationBhoovi