BLR Today
ಶನಿವಾರ, ಅಕ್ಟೋಬರ್ 17, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಮಲ್ಲಮ್ಮ ಬ್ಯಾಂಕ್ ಹಣ ದುರ್ಬಳಕೆ ಪ್ರಕರಣ, ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಮಲ್ಲಮ್ಮ ಬ್ಯಾಂಕ್ ಹಣ ದುರ್ಬಳಕೆ ಪ್ರಕರಣ, ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಚಿತ್ರ: Prajavani

ಮಾತೋಶ್ರೀ ಹೇಮರಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರ ಬ್ಯಾಂಕಿನಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಸಮಗ್ರವಾಗಿ ತನಿಖೆ ನಡೆಸಬೇಕು. ಬ್ಯಾಂಕಿನ ಅಧ್ಯಕ್ಷ ಬಸನಗೌಡ ಪಾಟೀಲ ಮರಕಲ್ ಅವರ ಆತ್ಮಹತ್ಯೆಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಸಮಾನ ಮನಸ್ಕರ ವೇದಿಕೆಯ ಮುಖಂಡರು ಬ್ಯಾಂಕಿನ ಮುಂದೆ ಪ್ರತಿಭಟನೆ ನಡೆಸಿಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಬ್ಯಾಂಕಿನ ಆಡಳಿತ ಮಂಡಳಿಯು ಅಕ್ರಮ ಎಸಗಿ ₹16.5 ಕೋಟಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರಿನ ಸೌಹಾರ್ದ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು ನೋಟಿಸ್ ನೀಡಿದ್ದಾರೆ. ಅಕ್ರಮಕ್ಕೆ ಸಾಥ್ ನೀಡಿದವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಬ್ಯಾಂಕಿನಲ್ಲಿ ಠೇವಣಿ ಇಟ್ಟಿರುವ ಠೇವಣಿದಾರರಿಗೆ ತಕ್ಷಣ ಹಣ ಸಂದಾಯ ಮಾಡಬೇಕು ಎಂದು ಮುಖಂಡರು ಆಗ್ರಹಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruProtestBanking FraudFinancial Mismanagement