BLR Today
ಗುರುವಾರ, ಅಕ್ಟೋಬರ್ 15, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru3 ಗಂಟೆಗಳ ಹಿಂದೆ

ಬೆಂಗಳೂರಿನ ಮತದಾರರನ್ನು ಡಿಲೀಟ್ ಮಾಡಲು ಅಕ್ರಮವಾಗಿ ಫಾರ್ಮ್ 7 ಸಲ್ಲಿಸಿದ ಬಗ್ಗೆ ಪ್ರತಿಭಟನೆ

ರಾಜ್ಯದಲ್ಲಿ ಮುಸ್ಲಿಂ ಮತ್ತು ಹಿಂದುಳಿದ ಸಮುದಾಯಗಳ ಮತದಾರರನ್ನು ತೆಗೆದುಹಾಕಲು ಅಕ್ರಮವಾಗಿ ಅರ್ಜಿ ನಮೂನೆ–7 ಸಲ್ಲಿಸಿರುವ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಜಮಾತೆ ಇಸ್ಲಾಮಿ ಹಿಂದ್‌ ಕರ್ನಾಟಕದ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ. ಸಲೀಂ ಇಂಜಿನಿಯರ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಾದ್ಯಂತ ಅಕ್ರಮವಾಗಿ ಸಾವಿರಾರು ಅರ್ಜಿ ನಮೂನೆ–7 ಅನ್ನು ಸಲ್ಲಿಸಲಾಗಿದೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಈ ಅರ್ಜಿಗಳಲ್ಲಿ ಸುಳ್ಳು ಮಾಹಿತಿಗಳನ್ನು ಭರ್ತಿ ಮಾಡಲಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruVoter ListForm 7Jamaat-e-Islami Hind