೨೬ರ ಸೋಮವಾರ ವಾಲ್ಮೀಕಿ ಜಯಂತಿಗೆ ಸಾರ್ವತ್ರಿಕ ರಜೆ
ಈ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇದೇ ೨೬ರ ಸೋಮವಾರ ಆಚರಿಸಲು ನಿರ್ಧರಿಸಲಾಗಿದ್ದು, ಆ ದಿನವನ್ನು ಸಾರ್ವತ್ರಿಕ ರಜೆಯನ್ನಾಗಿ ಘೋಷಿಸಿ ಆದೇಶ ಹೊರಡಿಸಲಾಗಿದೆ. ಹಿಂದಿನ ಪಟ್ಟಿಯಲ್ಲಿ ಅ. ೨೫ರ ಭಾನುವಾರ ವಾಲ್ಮೀಕಿ ಜಯಂತಿಯೆಂದು ಘೋಷಿಸಲಾಗಿತ್ತು. ಬದಲಿಗೆ ೨೬ರ ಶೀಗೆ ಹುಣ್ಣಿಮೆಯಂದು ಆಚರಿಸಲು ನಿರ್ಧರಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
Valmiki JayantiPublic HolidayBengaluru

