BLR Today
ಬುಧವಾರ, ಅಕ್ಟೋಬರ್ 28, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಬೆಂಗಳೂರು ಮಹಿಳೆ ಮತ್ತು ಮಕ್ಕಳ ಸುರಕ್ಷತೆ: ದೇಶದಲ್ಲಿಯೇ ಬೆಂಗಳೂರಿಗೆ ಮೊದಲನೇ ಸ್ಥಾನ!

ಬೆಂಗಳೂರು ಮಹಿಳೆ ಮತ್ತು ಮಕ್ಕಳ ಸುರಕ್ಷತೆ: ದೇಶದಲ್ಲಿಯೇ ಬೆಂಗಳೂರಿಗೆ ಮೊದಲನೇ ಸ್ಥಾನ!
ಚಿತ್ರ: Asianet Suvarna News

ನಗರದ ಟ್ರಾಫಿಕ್ ಮ್ಯಾನೇಜ್ ಮೆಂಟ್ ಕೇಂದ್ರದಲ್ಲಿ ನಡೆದ ದುಂಡು ಮೇಜಿನ ಸಮ್ಮೇಳನ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾತನಾಡಿ, ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಮತ್ತು ಭದ್ರತೆಗೆ ದೇಶದಲ್ಲೇ ಬೆಂಗಳೂರು ಮೊದಲ ಸ್ಥಾನದಲ್ಲಿದ್ದು, ವಿಶ್ವದಲ್ಲಿ 17ನೇ ಸ್ಥಾನದಲ್ಲಿದೆ ಎಂದರು. ತುರ್ತು ಸಂದರ್ಭದಲ್ಲಿ ಪೊಲೀಸ್ ಸಹಾಯವಾಣಿ-112ಗೆ ಕರೆ ಮಾಡಿದ ಕೆಲವೇ ನಿಮಿಷಗಳಲ್ಲಿ ನಮ್ಮ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪುತ್ತಾರೆ. ಈ ಸುರಕ್ಷತಾ ಕ್ರಮಗಳಿಗಾಗಿ ಕಾನ್ ಸ್ಟೇಬಲ್ ನಿಂದ ಪೊಲೀಸ್ ಇನ್ ಸ್ಪೆಕ್ಟರ್ ವರೆಗೂ ಕಳೆದೊಂದು ವರ್ಷದಲ್ಲಿ 20 ಸಾವಿರ ಅಧಿಕಾರಿ-ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದು ಅವರು ತಿಳಿಸಿದರು.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruSafetyWomen SafetyPoliceCrime Prevention