ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ; ಪತ್ನಿ ಎದುರಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಪತ್ನಿಯ ಕಣ್ಣೆದುರೇ ದುಷ್ಕರ್ಮಿಗಳ ಗ್ಯಾಂಗ್ ಉದ್ಯಮಿಯ ಮೇಲೆ ದಾಳಿ ನಡೆಸಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಮೃತರನ್ನು 39 ವರ್ಷದ ಚರಣ್ ಗೌಡ ಎಂದು ಗುರುತಿಸಲಾಗಿದೆ. ಇವರು ಧಣಿ ಪ್ರಾಪರ್ಟೀಸ್ ಸಂಸ್ಥೆಯ ಮಾಲೀಕರಾಗಿದ್ದು, ಕಳೆದ ಹತ್ತು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು.
ಮೂಲ ವರದಿ: Kannada Prabha
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCrimeMurder


