ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಮಾದಕ ವಸ್ತು ಜಪ್ತಿ – ಇಬ್ಬರು ಅರೆಸ್ಟ್
ಬೆಂಗಳೂರಿನಲ್ಲಿ ಕುಂಬಳಗೋಡು ಪೊಲೀಸರು ದಾಖಲೆ ಪ್ರಮಾಣದ ಗಾಂಜಾವನ್ನು ವಶಕ್ಕೆ ಪಡೆದು, ಇಬ್ಬರನ್ನು ಬಂಧಿಸಿದ್ದಾರೆ. ಕೇರಳ ಮತ್ತು ಒಡಿಶಾ ರಾಜ್ಯಗಳಿಂದ ಬೆಂಗಳೂರಿಗೆ ಬರ್ತಿದ್ದ ಸುಮಾರು 1.70 ಕೋಟಿ ರೂ. ಮೌಲ್ಯದ 317 ಕೆಜಿ ಮಾದಕ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಚಾಂದ್ ಪಾಷ ಮತ್ತು ವಿಷ್ಣುವನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಕಾರಿನ ಸೀಟ್‌ಗಳಲ್ಲಿ ಗಾಂಜಾವನ್ನು ಅಡಗಿಸಿ ನಗರಕ್ಕೆ ಸಾಗಾಟ ಮಾಡುತ್ತಿದ್ದರು. ಪೊಲೀಸರು ಕಾರನ್ನು ಅಡ್ಡಗಟ್ಡಿ ಪರಿಶೀಲನೆ ನಡೆಸಿದಾಗ, ಕಾರಿನ ಎಲ್ಲಾ ಸೀಟ್‌ಗಳು ಮತ್ತು ಇತರೆ ಭಾಗಗಳಲ್ಲಿ ಗಾಂಜಾ ಅಡಗಿಸಿ ತಂದಿರುವುದು ಪತ್ತೆಯಾಗಿದೆ. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಮೂಲ ವರದಿ: Public TV
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCrimeNarcoticsKumbalgodu Police


