ರೆನೈಸಾನ್ಸ್ ಸಿಬಿಐಸಿ ಪ್ರದೇಶದಲ್ಲಿ ₹5 ಸಾವಿರ ಕೋಟಿ ಹೂಡಿಕೆಗೆ ಆಸಕ್ತಿ: ಸಚಿವ
ಭಾರತ-ಅಮೆರಿಕ ಪಾಲುದಾರಿಕೆಯ ರೆನೈಸಾನ್ಸ್ ಸೋಲಾರ್ ಅಂಡ್ ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿಯು ತುಮಕೂರಿನ ಚೆನ್ನೈ- ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ (ಸಿಬಿಐಸಿ) ಪ್ರದೇಶದಲ್ಲಿ ₹ 5 ಸಾವಿರ ಕೋಟಿ ಬಂಡವಾಳ ಹೂಡಲು ಆಸಕ್ತಿ ತೋರಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ಗುರುವಾರ ಬೆಂಗಳೂರಿನ ಖನಿಜ ಭವನದಲ್ಲಿ ಅವರು ಕಂಪನಿಯ ಅಧ್ಯಕ್ಷ ಮತ್ತು ಸಿಇಒ ಡಾ.ಮಿಲಿಂದ್ ಎಸ್ ಕುಲಕರ್ಣಿ ಜತೆ ಸುದೀರ್ಘ ಮಾತುಕತೆ ನಡೆಸಿದರು. ಸಿಬಿಐಸಿ ಪ್ರದೇಶದಲ್ಲಿ 5 ಗಿಗಾವಾಟ್ ಸಾಮರ್ಥ್ಯದ ಸೋಲಾರ್ ಇನ್-ಗಾಟ್ ಮತ್ತು ವೇಫರ್ ತಯಾರಿಕೆ ಘಟಕ ಸ್ಥಾಪಿಸಲು ಕಂಪನಿಯು 100 ಎಕರೆ ಜಾಗ ಕೇಳಿದೆ ಎಂದು ಸಚಿವರು ತಿಳಿಸಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCBICInvestmentSolar Energy
