BLR Today
ಭಾನುವಾರ, ಅಕ್ಟೋಬರ್ 18, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru2 ಗಂಟೆಗಳ ಹಿಂದೆ

ಆರ್‌ಟಿಐ ಅರ್ಜಿ ಸಲ್ಲಿಕೆ ಈಗ ಮತ್ತಷ್ಟು ಸುಲಭ: ಗ್ರಾಮ ಒನ್‌ನಲ್ಲೂ ಲಭ್ಯ

ಆರ್‌ಟಿಐ ಅರ್ಜಿ ಸಲ್ಲಿಕೆ ಈಗ ಮತ್ತಷ್ಟು ಸುಲಭ: ಗ್ರಾಮ ಒನ್‌ನಲ್ಲೂ ಲಭ್ಯ
ಚಿತ್ರ: Prajavani

ನಾಗರಿಕರಿಗೆ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರವು ಮುಖ್ಯಮಂತ್ರಿ ಅನುಮೋದನೆಯೊಂದಿಗೆ ಎರಡು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ. ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಕಾಗದದ ರೂಪದ ಆರ್‌ಟಿಐ ಅರ್ಜಿಗಳನ್ನು ಸ್ವೀಕರಿಸಿದ ಸಾರ್ವಜನಿಕ ಪ್ರಾಧಿಕಾರವು 2 ದಿನಗಳ ಒಳಗಾಗಿ ಆರ್‌ಟಿಐ ಆನ್‌ಲೈನ್ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು. ಇಂಟರ್ನೆಟ್ ಅಥವಾ ಕಂಪ್ಯೂಟರ್ ಬಳಕೆ ತಿಳಿಯದ ಸಾರ್ವಜನಿಕರನು ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯದ ಎಲ್ಲಾ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಆರ್‌ಟಿಐ ಅರ್ಜಿ ಸಲ್ಲಿಸುವ ಸೌಲಭ್ಯವನ್ನು ವಿಸ್ತರಿಸಲಾಗಿದೆ. ನಾಗರಿಕರು ತಮ್ಮ ಸಮೀಪದ ಕೇಂದ್ರಕ್ಕೆ ತೆರಳಿ ಸಿಬ್ಬಂದಿಯ ನೆರವಿನಿಂದ ಅರ್ಜಿ ಸಲ್ಲಿಸಬಹುದು. ನಿಗದಿತ ಆರ್‌ಟಿಐ ಶುಲ್ಕ ಮತ್ತು ಕೇಂದ್ರದ ನಾಮಮಾತ್ರ ಸೇವಾ ಶುಲ್ಕವನ್ನು ಪಾವತಿಸಿ, ಸ್ಥಳದಲ್ಲೇ ಆನ್‌ಲೈನ್ ಸ್ವೀಕೃತಿ (Acknowledgement) ಪಡೆಯಬಹುದು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
RTIBengaluruKarnataka GovernmentCitizen Services