‘ಸಂಸ್ಕೃತಿ ಸಂಗಮ ಪ್ರಶಸ್ತಿ’ ಘೋಷಣೆ
ಡಾ.ಸಿ.ಸೋಮಶೇಖರ ಮತ್ತು ಶ್ರೀಮತಿ ಸರ್ವಮಂಗಳಾ ಸಾಹಿತ್ಯ ಸೇವಾ ಪ್ರತಿಷ್ಠಾನವು 2026ನೇ ಸಾಲಿನ ‘ಸಂಸ್ಕೃತಿ ಸಂಗಮ’ ಪ್ರಶಸ್ತಿಯನ್ನು ಘೋಷಿಸಿದೆ. ಜಾನಪದ ಕ್ಷೇತ್ರದಿಂದ ಅಪ್ಪಗೆರೆ ತಿಮ್ಮರಾಜು, ವಚನ ಸಾಹಿತ್ಯ ಕ್ಷೇತ್ರದಿಂದ ಎಂ.ಎಸ್. ಆಶಾದೇವಿ, ದಾಸ ಸಾಹಿತ್ಯ ಕ್ಷೇತ್ರದಿಂದ ಎಚ್.ಎನ್. ಮುರಳೀಧರ, ಸಾಂಸ್ಕೃತಿಕ ಸಂಘಟನಾ ಕ್ಷೇತ್ರದಿಂದ ಕೆ.ವಿ. ನಾಗರಾಜಮೂರ್ತಿ ಆಯ್ಕೆಯಾಗಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಗದಗದ ವೀರೇಶ್ವರ ಪುಣ್ಯಾಶ್ರಮ ಪ್ರಶಸ್ತಿಗೆ ಭಾಜನವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು 28ರಂದು ಸಂಜೆ 5.30ಕ್ಕೆ ಇಲ್ಲಿನ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಮತ್ತು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ ಅಧ್ಯಕ್ಷತೆ ವಹಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruAwardsLiteratureCulture


