ಸಪ್ನ ಬುಕ್ ಹೌಸ್ನಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಪುಸ್ತಕ ಜಾತ್ರೆ
ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸಪ್ನ ಬುಕ್ ಹೌಸ್ ನವೆಂಬರ್ 1ರಂದು ಗಾಂಧಿನಗರದ ತನ್ನ ಮಳಿಗೆಯಲ್ಲಿ ಪುಸ್ತಕ ಜಾತ್ರೆ ಹಮ್ಮಿಕೊಂಡಿದೆ. ಈ ಜಾತ್ರೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಒಂದು ಕನ್ನಡ ಪುಸ್ತಕವನ್ನು ಉಚಿತವಾಗಿ ನೀಡುವುದಾಗಿ ತಿಳಿಸಿದೆ. ಪುಸ್ತಕ ಜಾತ್ರೆಯನ್ನು ನಟ ದೊಡ್ಡಣ್ಣ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಸಾಹಿತಿ ಹಂಪ ನಾಗರಾಜಯ್ಯ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಆರ್. ಸುನಂದಮ್ಮ ಪಾಲ್ಗೊಳ್ಳಲಿದ್ದಾರೆ. ಗಾಯನ, ಜಾನಪದ ನೃತ್ಯ ಸೇರಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಪ್ನ ಬುಕ್ ಹೌಸ್ನ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಷಾ ಹಾಗೂ ಪ್ರಧಾನ ವ್ಯವಸ್ಥಾಕ ಆರ್. ದೊಡ್ಡೆಗೌಡ ತಿಳಿಸಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruSapna Book HouseKarnataka RajyotsavaBook Fair


