ಬೆಂಗಳೂರಿನ ಒಕ್ಕಲಿಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಜಸ್ಟೀಸ್ ಹೊಂಬೇಗೌಡ ಸೇವಾ ಸಮಿತಿ ವತಿಯಿಂದ ಒಕ್ಕಲಿಗ ಜನಾಂಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಎಚ್.ಚನ್ನಪ್ಪ ತಿಳಿಸಿದ್ದಾರೆ. ಏಪ್ರಿಲ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕೂ ಅಧಿಕ ಅಂಕ ಪಡೆದು ಬಿ.ಇ, ಎಂಬಿಬಿಎಸ್, ಬಿಡಿಎಸ್, ಬಿ.ಎಸ್ಸಿ (ಹೈನುಗಾರಿಕೆ), ಬಿ.ಎ,ಬಿಎಸ್‌ಸಿ, ಬಿ.ಕಾಂ, ಬಿಬಿಎಂ, ಬಿಸಿಎ, ಬಿಎಚ್‌ಎಂಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ವ್ಯಾಪ್ತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಬಿಳಿ ಹಾಳೆಯಲ್ಲಿ ಸ್ವವಿವರ ಬರೆದು, ಅಭ್ಯಾಸ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರಿಂದ ದೃಡೀಕರಣಪತ್ರದ ಜತೆಗೆ ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಅಂಕಪಟ್ಟಿಯನ್ನು ಇದೇ 21ರ ಒಳಗೆ ನಂ. 36/1, 9ನೇ ಮುಖ್ಯರಸ್ತೆ ವೃಷಭಾವತಿನಗರ, ಕಾಮಾಕ್ಷಿಪಾಳ್ಯ, ಬೆಂಗಳೂರು–79 ಈ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 9481245616 ಸಂಪರ್ಕಿಸಬಹುದು.


