BLR Today
ಬುಧವಾರ, ಅಕ್ಟೋಬರ್ 28, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧBengaluru1 ಗಂಟೆಗಳ ಹಿಂದೆ

ಬೆಂಗಳೂರಿನಲ್ಲಿ ತಂದೆ ಎದುರೇ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ವಿಜ್ಞಾನಿ

ಬೆಂಗಳೂರಿನಲ್ಲಿ ತಂದೆ ಎದುರೇ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ವಿಜ್ಞಾನಿ
ಚಿತ್ರ: Vijaya Karnataka

ಡಿಆರ್‌ಡಿಒ ಅಧೀನದ ವೈಮಾನಿಕ ಅಭಿವೃದ್ಧಿ ಸಂಸ್ಥೆಯ ಹಿರಿಯ ವಿಜ್ಞಾನಿಯಾಗಿದ್ದ 47 ವರ್ಷದ ಶರದ್ ಕಟಿಯಾರ್ ಎಂಬಾತ ಅ.21ರಂದು ತಮ್ಮ ತಂದೆಯೊಂದಿಗೆ ಮಾತನಾಡುವ ವೇಳೆಯೇ ಏಕಾಏಕಿ ಸೀಗೆಹಳ್ಳಿಯ ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದು, ಮಾನಸಿಕ ಖಿನ್ನತೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ತನಿಖೆ ಆರಂಭಿಸಲಾಗಿದೆ.

ಮೂಲ ವರದಿ: Vijaya Karnataka ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruCrimeSuicide