ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ; ಕರಾವಳಿ, ಮಲೆನಾಡಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆ ವಾಯುಭಾರ ಕುಸಿತ ಹಾಗೂ ಸುಳಿಗಾಳಿಯ ಪ್ರಭಾವದಿಂದಾಗಿ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆಯಿಂದಲೇ ಮಳೆ ಆರಂಭವಾಗಿದ್ದು, ವಾತಾವರಣ ತಂಪಾಗಿದೆ. ಹದವಾದ ಮಳೆಯ ನಡುವೆಯೂ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು ಹಾಗೂ ತರಕಾರಿ ಖರೀದಿಗಾಗಿ ಸಾರ್ವಜನಿಕರ ವ್ಯಾಪಾರ ವಹಿವಾಟು ಬಿರುಸಿನಿಂದ ಸಾಗಿದೆ.
ಮೂಲ ವರದಿ: TV9 Kannada
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruWeatherRainfall


