BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru5 ದಿನಗಳ ಹಿಂದೆ

ಆಶಾ ಕಾರ್ಯಕರ್ತೆಯರೊಂದಿಗೆ ಮಾತುಕತೆ ವಿಫಲ: ಹೋರಾಟ ಮುಂದುವರಿಯಲಿದೆ

ಆಶಾ ಕಾರ್ಯಕರ್ತೆಯರೊಂದಿಗೆ ಮಾತುಕತೆ ವಿಫಲ: ಹೋರಾಟ ಮುಂದುವರಿಯಲಿದೆ
ಚಿತ್ರ: Asianet Suvarna News

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಐದು ದಿನದಿಂದ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರೊಂದಿಗೆ ಸರ್ಕಾರ ಶನಿವಾರ ನಡೆಸಿದ ಮಾತುಕತೆ ವಿಫಲವಾಗಿದ್ದು, ಹೋರಾಟ ಮುಂದುವರಿಯಲಿದೆ. ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಶನಿವಾರ ಆಶಾ ಕಾರ್ಯಕರ್ತೆಯರ ಸಂಘದ ಪ್ರಮುಖರೊಂದಿಗೆ ಬೇಡಿಕೆಗಳ ಬಗ್ಗೆ ಎರಡನೇ ಸುತ್ತಿನ ಚರ್ಚೆ ನಡೆಸಿದರಾದರೂ ಮಾಸಿಕ 15 ಸಾವಿರ ರು. ಗೌರವಧನ ಪಾವತಿಗೆ ಸಂಬಂಧಿಸಿ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಹೋರಾಟ ಮುಂದುವರೆಸುವುದಾಗಿ ಆಶಾ ಕಾರ್ಯಕರ್ತೆಯರು ಸ್ಪಷ್ಟಪಡಿಸಿದ್ದಾರೆ.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
ASHA workersBengaluruProtestHealth Sector