BLR Today
ಮಂಗಳವಾರ, ಸೆಪ್ಟೆಂಬರ್ 29, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ಶ್ರೀನಿವಾಸಪುರದಲ್ಲಿ ಶಾರ್ಟ್ ಸರ್ಕಿಟ್‌ನಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಶ್ರೀನಿವಾಸಪುರದಲ್ಲಿ ಶಾರ್ಟ್ ಸರ್ಕಿಟ್‌ನಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ
ಚಿತ್ರ: Prajavani

ಶ್ರೀನಿವಾಸಪುರದಲ್ಲಿ ರಾಮಕೃಷ್ಣ ಬಡಾವಣೆಯ ವೆಂಕಟ್ ರಾಘವೇಂದ್ರ ಅವರ ಮನೆಯಲ್ಲಿ ಭಾನುವಾರ ಸಂಜೆ ಶಾರ್ಟ್ ಸರ್ಕಿಟ್‌ನಿಂದ ಲಕ್ಷಾಂತರ ಮೌಲ್ಯದ ಗೃಹ ಬಳಕೆಯ ವಸ್ತುಗಳು ಸುಟ್ಟು ಕರಲಾಗಿವೆ. ಹೈವೋಲ್ಟೇಜ್ ವಿದ್ಯುತ್ ಹರಿದ ಪರಿಣಾಮ ಫ್ರಿಡ್ಜ್‌ಗೆ ಬೆಂಕಿ ಹೊತ್ತಿ ಕೊಂಡಿದ್ದು, ನಂತರ ಮನೆಯ ಇತರೆ ಭಾಗಗಳಿಗೆ ವ್ಯಾಪಿಸಿದೆ. ಇದರಿಂದ ಸುಮಾರು ಆರೇಳು ಲಕ್ಷ ನಷ್ಟ ಉಂಟಾಗಿದೆ ಎಂದು ವೆಂಕಟ್ ರಾಘವೇಂದ್ರ ತಿಳಿಸಿದ್ದಾರೆ. ಸ್ಥಳಕ್ಕೆ ತಕ್ಷಣ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BESCOMSrinivasapuraBengaluru