BLR Today
ಶನಿವಾರ, ಅಕ್ಟೋಬರ್ 31, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿBengaluru1 ಗಂಟೆಗಳ ಹಿಂದೆ

ದೀಪಾವಳಿಗೆ 2600 ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ; ಬೆಂಗಳೂರಿನ 3 ನಿಲ್ದಾಣದಿಂದ ಕಾರ್ಯಾಚರಣೆ

ದೀಪಾವಳಿಗೆ 2600 ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ; ಬೆಂಗಳೂರಿನ 3 ನಿಲ್ದಾಣದಿಂದ ಕಾರ್ಯಾಚರಣೆ
ಚಿತ್ರ: Asianet Suvarna News

ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ನವೆಂಬರ್ 6 ರಿಂದ ನವೆಂಬರ್ 8 ರವರೆಗೆ 2,600 ಹೆಚ್ಚುವರಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ. ಈ ಬಸ್ ಗಳು ಪ್ರಮುಖವಾಗಿ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಟಿಟಿಎಂಸಿ ನಿಲ್ದಾಣಗಳಿಂದ ಕಾರ್ಯಾಚರಣೆ ನಡೆಸಲಿವೆ. ಶಾಂತಿನಗರ, ವಿಜಯನಗರ, ಯಶವಂತಪುರ, ಜಯನಗರ, ಮಲ್ಲೇಶ್ವರಂ 18 ನೇ ಕ್ರಾಸ್, ಬಸವೇಶ್ವರ ನಗರ, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ ಹಾಗೂ ಟಿನ್ ಫ್ಯಾಕ್ಟರಿ ಸೇರಿದಂತೆ ನಗರದ ವಿವಿಧ ನಿಲ್ದಾಣಗಳಿಂದ ಬಸ್ ಗಳು ಹೊರಡಲಿವೆ.

ಮೂಲ ವರದಿ: Asianet Suvarna News ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruKSRTCDeepavaliBus Service