BLR Today
ಶುಕ್ರವಾರ, ಅಕ್ಟೋಬರ್ 16, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru2 ಗಂಟೆಗಳ ಹಿಂದೆ

ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಸಿಹಿ ತಿಂಡಿಗಳ ವಿಶೇಷ ತಪಾಸಣಾ ಕಾರ್ಯಾಚರಣೆ

ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಸಿಹಿ ತಿಂಡಿಗಳ ವಿಶೇಷ ತಪಾಸಣಾ ಕಾರ್ಯಾಚರಣೆ
ಚಿತ್ರ: Prajavani

ಹಬ್ಬಗಳು ಸಮೀಪಿಸುತ್ತಿರುವ ಕಾರಣ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಸಿಹಿ ತಿಂಡಿಗಳ ವಿಶೇಷ ತಪಾಸಣಾ ಕಾರ್ಯಾಚರಣೆಯನ್ನು ಗುರುವಾರದಿಂದ ಪ್ರಾರಂಭಿಸಿದ್ದಾರೆ. ಈ ವಿಶೇಷ ತಪಾಸಣೆಯ ಸಂದರ್ಭದಲ್ಲಿ ಅಂಕಿತಾಧಿಕಾರಿಗಳು ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯದಾದ್ಯಂತ ಒಟ್ಟು 80 ಕಡೆ ಸಿಹಿ ತಿಂಡಿ ತಯಾರಿಕ ಮತ್ತು ಮಾರಾಟ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದರು. ಒಟ್ಟು 125 ಆಹಾರ ಮಾದರಿಗಳನ್ನು ಸಂಗ್ರಹಿಸಿ, ಅವುಗಳ ಗುಣಮಟ್ಟ ಹಾಗೂ ಆಹಾರ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಲು ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ನೈರ್ಮಲ್ಯ ಕೊರತೆ, ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರಗಳ ಕೊರತೆ ಮತ್ತು ಎಫ್‌ಎಸ್‌ಎಸ್‌ಎಐ ಪರವಾನಗಿ ಪಡೆಯದಿರುವುದು ಕಂಡುಬಂದ ಹಿನ್ನೆಲೆಯಲ್ಲಿ 10 ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಆಹಾರ ಉದ್ದಿಮೆದಾರರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruFood SafetyFestivalInspection