ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದಿಂದ ಆನ್‌ಲೈನ್ ಪಿ.ಜಿ.ಕೋರ್ಸ್‌ಗೆ ಚಾಲನೆ
ಸೇಂಟ್ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾಲಯವು ಎಂಬಿಎ, ಎಂಸಿಎ ಮತ್ತು ಎಂ.ಕಾಂ ಸ್ನಾತಕೋತ್ತರ ಪದವಿ ಕೋರ್ಸುಗಳ ಆನ್‌ಲೈನ್ ಶಿಕ್ಷಣಕ್ಕೆ ಚಾಲನೆ ನೀಡಿದೆ. ಅಲ್ಲದೆ ಫ್ಯೂಚರ್ ಫಸ್ಟ್ ಲರ್ನಿಂಗ್ ಸಲ್ಯೂಷನ್ಸ್ ಸಹಯೋಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಆನ್ವಯಿಕ ಕಲಿಕಾ ಶ್ರೇಷ್ಠತಾ ಕೇಂದ್ರ ಸ್ಥಾಪಿಸುವುದಾಗಿ ವಿಶ್ವವಿದ್ಯಾಲಯವು ಪ್ರಕಟಿಸಿದೆ. ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಜೆ.ಪ್ರವೀಣ್ ಮಾರ್ಟಿಸ್ ಮಾತನಾಡಿ, ‘ವಿಶ್ವವಿದ್ಯಾಲಯದ 146 ವರ್ಷಗಳ ಇತಿಹಾಸದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. ಉನ್ನತ ಶಿಕ್ಷಣವನ್ನು ಸುಲಭವಾಗಿ ಲಭ್ಯವಾಗಿಸುವ ಜೊತೆಗೆ ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಹೊಸ ತಂತ್ರಜ್ಞಾನಗಳಿಗೆ ತಕ್ಕಂತೆ ಅಗತ್ಯವಿರುವ ಜ್ಞಾನ ಮತ್ತು ಕೌಶಲಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುವುದು ಇದರ ಉದ್ದೇಶವಾಗಿದೆ’ ಎಂದರು. ನಿರ್ವಹಣೆ, ವಾಣಿಜ್ಯ, ಹಣಕಾಸು ಮತ್ತು ಕಂಪ್ಯೂಟರ್ ಅಪ್ಲಿಕೇಷನ್ಸ್ ಸೇರಿದಂತೆ ವಿವಿಧ ವಿಷಯಗಳಲ್ಲಿ ಆನ್‌ಲೈನ್ ಹಾಗೂ ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಸಮ ಕುಲಾಧಿಪತಿ ಡಾ.ಮೆಲ್ವಿನ್ ಡಿ.ಕುನ್ಹಾ ತಿಳಿಸಿದರು.


