ರಾಜ್ಯ ಸರ್ಕಾರವು ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ
ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿರುವ 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ, ಈ ಅಧಿಕಾರಿಗಳು ತಮ್ಮ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಪ್ರತಿಪಾದಿಸಿ ಸುಪ್ರೀಂ ಕೋರ್ಟ್‌ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ. ಈ ಸಾಲಿನ ಗೆಜೆಟೆಡ್ ಪ್ರೊಬೇಷನರಿ 362 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ನಡೆಸಿದ್ದ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳ ನೇಮಕಾತಿಗೆ ಸಿಂಧುತ್ವದ ಮುದ್ರೆ ಒತ್ತಲು ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ‘ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್‌ಗಳ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಕಾಯ್ದೆ– 2022’ ಅನ್ನು ಸುಪ್ರೀಂ ಕೋರ್ಟ್ ಅ. 29ರಂದು ರದ್ದುಪಡಿಸಿತ್ತು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruKarnatakaSupreme CourtState GovernmentGazetted Probationers


