ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ
ದೇವನಹಳ್ಳಿ: ತಾಲ್ಲೂಕಿನ ಚನ್ನರಾಯಪಟ್ಟಣ ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ (ಜಿಟಿಟಿಸಿ) ಹಾಸ್ಟೆಲ್‌ನಲ್ಲಿ ಡಿಪ್ಲೊಮಾ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಜೋಹೆಲ್ (18) ಮೃತ ವಿದ್ಯಾರ್ಥಿ. ಹಾಸ್ಟೆಲ್ ಕೊಠಡಿಯಲ್ಲಿದ್ದ ಪ್ಯಾನ್‌ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಮೃತದೇಹ ಪತ್ತೆಯಾಗಿದೆ. ಚನ್ನರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ವಿದ್ಯಾರ್ಥಿ ವೈಯಕ್ತಿಕ ವಿಚಾರ ಸೇರಿದಂತೆ ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆಹಾಕಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
Bengalurusuicidehostelcrime


