BLR Today
ಶನಿವಾರ, ಅಕ್ಟೋಬರ್ 31, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ಗಂಟೆಗಳ ಹಿಂದೆ

ಬೆಂಗಳೂರಿನ ಜ್ಞಾನಭಾರತಿ ಬಳಿ ಅನುಮಾನಾಸ್ಪದ ಸ್ಫೋಟಕ ವಸ್ತು ಪತ್ತೆ

ಬೆಂಗಳೂರಿನ ಜ್ಞಾನಭಾರತಿ ಬಳಿ ಅನುಮಾನಾಸ್ಪದ ಸ್ಫೋಟಕ ವಸ್ತು ಪತ್ತೆ
ಚಿತ್ರ: Kannada Prabha

ಬೆಂಗಳೂರಿನ ಪುಲಿಕೇಶಿನಗರದಲ್ಲಿ ಜ್ಞಾನಭಾರತಿ ಬಳಿ ಅನುಮಾನಾಸ್ಪದ ಸ್ಫೋಟಕ ವಸ್ತು ಪತ್ತೆಯಾಗಿದೆ. ಸೊಣ್ಣೇನಹಳ್ಳಿ ಸರ್ಕಲ್ ಬಳಿ ಬಂಡೆಗಳನ್ನು ಸ್ಫೋಟಿಸಲು ಬಳಸುವ ಡೈನಾಮೈಟ್ ರೀತಿಯ ಸ್ಫೋಟಕ ಮಾದರಿಯ ವಸ್ತು ಪತ್ತೆಯಾಗಿದೆ. ಬಾಂಬ್ ನಿಷ್ಕ್ರೀಯ ದಳದೊಂದಿಗೆ ಸ್ಥಳಕ್ಕೆ ಧಾವಿಸಿದ ಜ್ಞಾನಭಾರತಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸ್ಫೋಟಕ ವಸ್ತುವನ್ನು ಇಲ್ಲಿ ತಂದಿಟ್ಟವರು ಯಾರು ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮೂಲ ವರದಿ: Kannada Prabha ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruExplosive MaterialCrime