ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ ಪ್ರಕರಣಕ್ಕೆ ಬೆಂಗಳೂರು ಟೆಕ್ಕಿ ಬಂಧನ
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಹಲವು ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬೆಂಗಳೂರಿನ ಟೆಕ್ಕಿಯೊಬ್ಬನನ್ನ ಬಂಧಿಸಿದ್ದಾರೆ. ಬಂಧಿತ ಟೆಕ್ಕಿಯ ಹೆಸರು ವೈಭವ್ ಮಿಶ್ರಾ ಎಂದು ತಿಳಿದುಬಂದಿದೆ. ನಟರಾದ ತುಷಾರ್ ಕಪೂರ್ ಮತ್ತು ಆಯುಷ್ಮಾನ್ ಖುರಾನಾ ಸೇರಿದಂತೆ ಹಲವು ಸೆಲೆಬ್ರಿಟಿಗಳಿಗೆ ವೈಭವ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ವೈಭವ್ ಮಿಶ್ರಾನನ್ನ ಬಂಧಿಸಿರುವ ಮುಂಬೂ ಕ್ರೈಂ ಬ್ರಾಚ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮೂಲ ವರದಿ: Public TV
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
crimeBengaluruarrest


