BLR Today
ಮಂಗಳವಾರ, ನವೆಂಬರ್ 10, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru2 ಗಂಟೆಗಳ ಹಿಂದೆ

ಹಗರಿಬೊಮ್ಮನಹಳ್ಳಿ ಟ್ರಾನ್ಸ್‌ಫಾರ್ಮರ್‌ಗೆ ಬೆಂಕಿ, ಆತಂಕ ಸೃಷ್ಟಿ

ಹಗರಿಬೊಮ್ಮನಹಳ್ಳಿ ಟ್ರಾನ್ಸ್‌ಫಾರ್ಮರ್‌ಗೆ ಬೆಂಕಿ, ಆತಂಕ ಸೃಷ್ಟಿ
ಚಿತ್ರ: Prajavani

ಹಗರಿಬೊಮ್ಮನಹಳ್ಳಿ: ಪಟ್ಟಣದ ಬಸವೇಶ್ವರ ಬಜಾರ್‌ನಲ್ಲಿ ಅಳವಡಿಸಿರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಸೋಮವಾರ ಬೆಂಕಿಬಿದ್ದಿದ್ದು, ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ತರಕಾರಿ ಮಾರುಕಟ್ಟೆ ರಸ್ತೆಯಲ್ಲಿರುವ 63 ಕೆ.ವಿ.ಸಾಮರ್ಥ್ಯದ ಟ್ರಾನ್ಸ್‌ಫಾರ್ಮರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿದ್ದು, ಕ್ಷಣಾರ್ಧದಲ್ಲಿಯೇ ಸಂಪೂರ್ಣ ಬೆಂಕಿ ಹತ್ತಿ ಧಗಧಗನೆ ಉರಿಯಿತು. ಅಲ್ಲಿ ನೂರಾರು ಜನ ಹಬ್ಬದ ಖರೀದಿಯಲ್ಲಿ ತೊಡಗಿದ್ದರು. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜೆಸ್ಕಾಂ ಎಂಜನಿಯರ್ ಚಂದ್ರಮೋಹನ್ ತಿಳಿಸಿದ್ದಾರೆ. ಟ್ರಾನ್ಸ್‍ಫಾರ್ಮರ್‌ನಲ್ಲಿದ್ದ ಆಯಿಲ್ ಖಾಲಿ ಆಗಿದೆ, ಒಳಗಿನ ವೈಂಡಿಂಗ್ ಅತಿಯಾಗಿ ಶಾಖಗೊಂಡು ಬೆಂಕಿ ಹತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruElectricalAccident