ಸಾರಿಗೆ ನಿಗಮಗಳ ನೌಕರರ ಧರಣಿ ಅಕ್ಟೋಬರ್ 7ರಂದು
ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸಲು ಅಕ್ಟೋಬರ್ 7ರಂದು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಜಂಟಿ ಕ್ರಿಯಾ ಸಮಿತಿಯ ಪ್ರಮುಖರಾದ ಜ್ಯೋತಿ ಅನಂತಸುಬ್ಬರಾವ್ ಮತ್ತು ಬಿ.ಜಯದೇವರಾಜೇ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡ ಅವರು, ವೇತನ ಪರಿಷ್ಕರಣೆ 2024ರ ಜನವರಿಯಿಂದಲೇ ಅನ್ವಯವಾಗುವಂತೆ ಆದೇಶವನ್ನು ತಿದ್ದುಪಡಿ ಮಾಡಬೇಕು, ಶೇಕಡ 15ಕ್ಕಿಂತಲೂ ವೇತನ ಹೆಚ್ಚಳ ಮಾಡಬೇಕು ಮತ್ತು 2020ರ ಸಾಲಿನ 12 ತಿಂಗಳ ಹಿಂಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ನೌಕರರ ಮಾಸಿಕ ಹಾಗೂ ದಿನಭತ್ಯೆ ಹೆಚ್ಚಿಸಬೇಕು ಹಾಗೂ ಬಾಕಿ ಪಿಎಫ್, ಗ್ರ್ಯಾಚ್ಯಟಿ, ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruProtestTransport Workers


