BLR Today
ಶನಿವಾರ, ಅಕ್ಟೋಬರ್ 31, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯBengaluru1 ಗಂಟೆಗಳ ಹಿಂದೆ

‘ಸ್ಟಿಂಗ್’ ಕಾರ್ಯಾಚರಣೆ: ಜೆಡಿಎಸ್‌ನ ಇಬ್ಬರ ವಿಚಾರಣೆ

‘ಸ್ಟಿಂಗ್’ ಕಾರ್ಯಾಚರಣೆ: ಜೆಡಿಎಸ್‌ನ ಇಬ್ಬರ ವಿಚಾರಣೆ
ಚಿತ್ರ: Prajavani

ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ‘ಸ್ಟಿಂಗ್’ ಕಾರ್ಯಾಚರಣೆ ಸಂಬಂಧ ಜೆಡಿಎಸ್‌ನ ಇಬ್ಬರು ಕಾರ್ಯಕರ್ತರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಜೆಡಿಎಸ್‌ನ ಸಾಮಾಜಿಕ ಜಾಲತಾಣ ವಿಭಾಗದ ಮಖ್ಯಸ್ಥ ಮೋಹನ್‌ ಗೌಡ ಮತ್ತು ಚಂದನ್‌ ಅವರನ್ನು ಶುಕ್ರವಾರ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿಚಾರಣೆ ನಡೆಸಲಾಗಿದೆ. ಪ್ರಕರಣ ಸಂಬಂಧ ಈ ಹಿಂದೆ ಇಬ್ಬರಿಗೂ ಮೂರು ಬಾರಿ ನೋಟಿಸ್‌ ನೀಡಲಾಗಿತ್ತು. ಶುಕ್ರವಾರ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ. ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruJDSCCBSiddaramaiah