BLR Today
ಶುಕ್ರವಾರ, ಅಕ್ಟೋಬರ್ 16, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru3 ಗಂಟೆಗಳ ಹಿಂದೆ

ಬೆಂಗಳೂರಿನಲ್ಲಿ ಲಾರಿ ಡಿಕ್ಕಿ ಹೊಡೆದು ಇಬ್ಬರ ಸಾವು

ಬೆಂಗಳೂರಿನಲ್ಲಿ ಲಾರಿ ಡಿಕ್ಕಿ ಹೊಡೆದು ಇಬ್ಬರ ಸಾವು
ಚಿತ್ರ: Prajavani

ಬೆಂಗಳೂರಿನ ಆಡುಗೋಡಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯ ಜಂಕ್ಷನ್‌ ಬಳಿ ಸಿಗ್ನಲ್‌ ಬಿಡುತ್ತಿದ್ದಂತೆಯೇ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಮೃತಪಟ್ಟಿದ್ದಾರೆ. ಬಿಹಾರದ ಮುಜಾಹಿದ್‌ ಆಲಂ (32) ಹಾಗೂ ಮೊಹಮ್ಮದ್‌ ದಿಲ್ದಾರ್‌ (28) ಮೃತರು. ಬುಧವಾರ ರಾತ್ರಿ 10.30ರ ಸುಮಾರಿಗೆ ಆಡುಗೋಡಿ ಚೆಕ್‌ಪೋಸ್ಟ್‌ ಬಳಿ ಸಿಗ್ನಲ್‌ ಇದ್ದ ಕಾರಣಕ್ಕೆ ಬೈಕ್‌ ನಿಲ್ಲಿಸಿಕೊಂಡಿದ್ದ ಇಬ್ಬರು, ಹಿಂಬದಿಯಿಂದ ವೇಗವಾಗಿ ಬಂದ ಲಾರಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruAccidentCrime