ಮತ್ತಿಬ್ಬರು ಆಶಾ ಕಾರ್ಯಕರ್ತೆಯರು ಆಸ್ಪತ್ರೆಗೆ ದಾಖಲು: ಈವರೆಗೆ 20 ಮಹಿಳೆಯರು ಅಸ್ವಸ್ಥ
ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 9ನೇ ದಿನಕ್ಕೆ ಕಾಲಿಟ್ಟಿದೆ. ಅನ್ನಾಹಾರದ ಕೊರತೆ, ಶೌಚಾಲಯ ಸಮಸ್ಯೆ, ಚಳಿಯ ತೀವ್ರತೆಯಿಂದಾಗಿ ಮತ್ತಿಬ್ಬರು ಅಸ್ವಸ್ಥರಾಗಿದ್ದಾರೆ. ವಿಜಯನಗರ ಜಿಲ್ಲೆಯ, ಹಗರಿಬೊಮ್ಮನಹಳ್ಳಿಯ ಜುಬೇದಾ ಬೇಗಂ ( 36 ) ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನು ದೊಡ್ಡಬಳ್ಳಾಪುರದ ಲಕ್ಷ್ಮಮ್ಮ (50) ಎದೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಕೂಡಲೇ ಇಬ್ಬರನ್ನು ಆ್ಯಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದರೊಂದಿಗೆ 9 ದಿನದ ಪ್ರತಿಭಟನೆಯಲ್ಲಿ ಈವರೆಗೂ 20 ಮಂದಿ ಅಸ್ವಸ್ಥರಾಗಿದ್ದಾರೆ.
ಮೂಲ ವರದಿ: TV9 Kannada
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruASHA workersProtestHealth


