ವಿಧಾನ ಪರಿಷತ್ ಚುನಾವಣೆಗೆ ಮತದಾನ ಆರಂಭ: ಅಕ್ಟೋಬರ್ 27 ರಂದು ಫಲಿತಾಂಶ ಪ್ರಕಟ
ವಿಧಾನ ಪರಿಷತ್ ಚುನಾವಣೆಗಾಗಿ ನಾಲ್ಕು ಸ್ಥಾನಗಳಿಗೆ ಮತದಾನ ಶುಕ್ರವಾರ ಬೆಳಿಗ್ಗೆ ಆರಂಭಗೊಂಡಿದೆ. ನಾಲ್ಕು ಕ್ಷೇತ್ರಗಳಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಯಾವುದೇ ಅಹಿತರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಮತದಾರರು ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ನಗರದ ನಾಗರಬಾವಿ ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮೂಲ ವರದಿ: Kannada Prabha
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruVidhana ParishadElectionPolitics


