Bengaluru Today
ಸೋಮವಾರ, ಸೆಪ್ಟೆಂಬರ್ 21, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru1 ದಿನಗಳ ಹಿಂದೆ

ಬೆಂಗಳೂರಿನ ಗಿಫ್ಟ್ ಐಟಂಗಳ ಗೋಡೌನ್‌ನಲ್ಲಿ ಭಾರೀ ಬೆಂಕಿ ಅವಘಡ

ಬೆಂಗಳೂರಿನ ಗಿಫ್ಟ್ ಐಟಂಗಳ ಗೋಡೌನ್‌ನಲ್ಲಿ ಭಾರೀ ಬೆಂಕಿ ಅವಘಡ
ಚಿತ್ರ: TV9 Kannada

ಬೆಂಗಳೂರಿನಲ್ಲಿ ಗಿಫ್ಟ್ ಐಟಂಗಳ ಗೋಡೌನ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪಟ್ಟಣಗೆರೆ ಮೆಟ್ರೋ ನಿಲ್ದಾಣ ಬಳಿ ಇರುವ ಎಂಎಫ್ ಎಂಟರ್ ಪ್ರೈಸ್‌ನ ಗೋಡೌನ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದ್ದು, ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruFireAccident