BLR Today
ಭಾನುವಾರ, ಅಕ್ಟೋಬರ್ 25, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBengaluru2 ಗಂಟೆಗಳ ಹಿಂದೆ

ಅಧಿಕಾರಿಗಳು-ಗುತ್ತಿಗೆದಾರರ ಸಂಘರ್ಷ: ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಉಲ್ಬಣ

ಅಧಿಕಾರಿಗಳು-ಗುತ್ತಿಗೆದಾರರ ಸಂಘರ್ಷ: ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಉಲ್ಬಣ
ಚಿತ್ರ: Prajavani

ಆಯುಧಪೂಜೆ, ವಿಜಯದಶಮಿ ನಂತರ ಹಲವು ರಸ್ತೆ, ಪಾದಚಾರಿ ಮಾರ್ಗಗಳಲ್ಲಿ ಬಿದ್ದಿರುವ ಬಾಳೆಕಂದು, ಕುಂಬಳಕಾಯಿ, ಹೂವು ಸೇರಿದಂತೆ ಇತರೆ ತ್ಯಾಜ್ಯ ಇನ್ನೂ ವಿಲೇವಾರಿಯಾಗಿಲ್ಲ. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಡುವೆ ಸಂಘರ್ಷ ಹೆಚ್ಚಾಗಿದ್ದು, ನಗರದಲ್ಲಿ ಕಸ ಸಮಸ್ಯೆ ಇನ್ನೂ ಉಲ್ಬಣಿಸಿದೆ. ಗುತ್ತಿಗೆದಾರರು ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್‌ಡಬ್ಲ್ಯುಎಂಎಲ್‌) ಅಧಿಕಾರಿಗಳ ನಡುವೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಕೆಲವು ತಿಂಗಳಿನಿಂದ ಸಂಘರ್ಷ ನಡೆಯುತ್ತಿದ್ದು, ಅದು ಇದೀಗ ಉಲ್ಬಣಿಸಿದೆ. ಹೀಗಾಗಿ, ಕಸ ಸಂಗ್ರಹಿಸುವ ಗುತ್ತಿಗೆದಾರರು ವಿಲೇವಾರಿ ಕಾರ್ಯವನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruWaste ManagementBBMPContractor Dispute