ಪ್ರತಿಭಟನೆ ವೇಳೆ ಪ್ರಜ್ಞೆ ಕಳೆದುಕೊಂಡ ಮಹಿಳೆ: ಸಚಿವ ಹೆಚ್.ಸಿ. ಬಾಲಕೃಷ್ಣ ಪೊಲೀಸರನ್ನು ಛೂಬಿಟ್ರಾ? ಜೆಡಿಎಸ್ ಆರೋಪ
ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾವನೆ ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವು 6ನೇ ದಿನಕ್ಕೆ ಕಾಲಿಟ್ಟಿದೆ. ಬೈರಮಂಗಲ ಗ್ರಾಮದಲ್ಲಿ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದಾಗ ನೂಕಾಟ, ತಳ್ಳಾಟ ನಡೆದಿದ್ದು, ಮಹಿಳೆಯೊಬ್ಬರು ಪ್ರಜ್ಞೆ ಕಳೆದುಕೊಂಡು ನೆಲಕ್ಕುರುಳಿ ಬಿದಿದ್ದಾರೆ. ಈ ಘಟನೆಯ ಕುರಿತು ಜೆಡಿಎಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.
ಮೂಲ ವರದಿ: Kannada Prabha
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruProtestLand AcquisitionJDSFarmers


