ಹಗರಿ ಕ್ಯಾದಿಗಿಹಳ್ಳಿ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಒಬ್ಬನೇ ವಿದ್ಯಾರ್ಥಿ
ತಾಲ್ಲೂಕಿನ ಹಗರಿ ಕ್ಯಾದಿಗಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 8 ನೇ ತರಗತಿಯ ವರೆಗಿನ ವಿದ್ಯಾರ್ಥಿಗಳ ಸಂಖ್ಯೆ ಎರಡಂಕಿ ದಾಟಿಲ್ಲ. 1ನೇ ತರಗತಿಯಲ್ಲಿ 5, 2ನೇ ತರಗತಿಯಲ್ಲಿ 10, 3ನೇ ತರಗತಿಯಲ್ಲಿ 8, 4ನೇ ತರಗತಿಯಲ್ಲಿ 11, 5ನೇ ತರಗತಿಯಲ್ಲಿ 9, 6ನೇ ತರಗತಿಯಲ್ಲಿ 12, ಏಳನೇ ತರಗತಿಯಲ್ಲಿ 12, 8ನೇ ತರಗತಿಯಲ್ಲಿ ಕೇವಲ ಒಬ್ಬ ವಿದ್ಯಾರ್ಥಿ ಸೇರಿದಂತೆ ಒಟ್ಟು 68 ವಿದ್ಯಾರ್ಥಿಗಳಿದ್ದಾರೆ. 1961ರಲ್ಲಿ ಸ್ಥಾಪನೆಗೊಂಡ ಶಾಲೆಯಲ್ಲಿ 7 ಕೊಠಡಿಗಳಿವೆ, ಶೌಚಾಲಯದ ವ್ಯವಸ್ಥೆ ಇಲ್ಲ. ಶಾಲೆಯ ಸುತ್ತುಗೋಡೆ ಕಾಮಗಾರಿ ಅಪೂರ್ಣಗೊಂಡಿದೆ. ಇತ್ತೀಚಿನ ವರ್ಷಗಳಲ್ಲಿ ಶಾಲೆಗೆ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆ ಭಾರಿ ಇಳಿಮುಖ ಕಂಡಿದೆ. ಗ್ರಾಮಸ್ಥರು ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಗೊಂಡರೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
educationBengaluruHagari KyadigihalliBommanahalli
