ಹಗರಿಬೊಮ್ಮನಹಳ್ಳಿ ಆರೋಗ್ಯ ಸುರಕ್ಷಾಧಿಕಾರಿ ಆತ್ಮಹತ್ಯೆ
ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಬಲ್ಲಾಹುಣ್ಸಿ ಗ್ರಾಮದಲ್ಲಿ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶೀಲಾ (28) ಆತ್ಮಹತ್ಯೆಗೆ ಶರಣಾಗಿದ್ದಾರೆ. ನ.11ರಂದು ವಿಷ ಸೇವಿಸಿದ್ದ ಅವರನ್ನು ಹುಬ್ಬಳ್ಳಿಯ ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
suicidehealth officerBommanahalli


