BLR Today
ಸೋಮವಾರ, ನವೆಂಬರ್ 9, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ನಗರBommanahalli2 ಗಂಟೆಗಳ ಹಿಂದೆ

ಹಗರಿಬೊಮ್ಮನಹಳ್ಳಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಪೂರಕ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಕೆ.ನೇಮರಾಜನಾಯ್ಕ ಚಾಲನೆ

ಹಗರಿಬೊಮ್ಮನಹಳ್ಳಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಪೂರಕ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಕೆ.ನೇಮರಾಜನಾಯ್ಕ ಚಾಲನೆ
ಚಿತ್ರ: Prajavani

ಶಾಲಾ ಮಕ್ಕಳು ದೈಹಿಕವಾಗಿ ಸದೃಢವಾಗಿರಲು ಪೌಷ್ಟಿಕ ಆಹಾರ ಅತ್ಯವಶ್ಯಕ ಎಂದು ಶಾಸಕ ಕೆ.ನೇಮರಾಜನಾಯ್ಕ ಹೇಳಿದರು. ತಾಲ್ಲೂಕಿನ ಹರೇಗೊಂಡನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಪೂರಕ ಪೌಷ್ಠಿಕ ಆಹಾರ ವಿತರಣೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ತಾ.ಪಂ ಇಒ ಪಾಲಯ್ಯನಕೋಟೆ ವಿಶ್ವನಾಥ, ಬಿಇಒ ಎಸ್.ಎಸ್.ಜಗದೀಶ್, ಎಂ.ಎಸ್.ಪ್ರಭಾಕರ, ಅಕ್ಷರ ದಾಸೋಹದ ಸಹಾಯಕ‌ ನಿರ್ದೇಶಕ ರಾಜಕುಮಾರನಾಯ್ಕ, ಎಸ್ಡಿಎಂಸಿ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ ಎ.ಕೆ.ಮಂಗಳಾ, ಮುಖ್ಯ ಶಿಕ್ಷಕ ಕಾಶಿವಿಶ್ವನಾಥ, ಮುಖಂಡರಾದ ಹುಡೇದ ಹುಲುಗಪ್ಪ, ಕಲ್ಲೊಡ್ಡಿ ಕರಿಬಸಪ್ಪ, ಬಸವರಾಜ, ವೀರಣ್ಣ, ಚಂದ್ರಪ್ಪ, ಕೊಟ್ರಪ್ಪ ಉಪಸ್ಥಿತರಿದ್ದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruBommanahalliEducationNutrition