ಚಂದಾಪುರ ರೈಲ್ವೆ ಸೇತುವೆ ಕಾಮಗಾರಿ ಸ್ಥಳದಲ್ಲಿ ಲಾರಿ ಡಿಕ್ಕಿ, ಎರಡು ಕಾರು ಜಖಂ
ಚಂದಾಪುರ (ಆನೇಕಲ್): ಇಲ್ಲಿಗೆ ಸಮೀಪದ ಹಳೇ ಚಂದಾಪುರ ರೈಲ್ವೆ ಸೇತುವೆ ಕಾಮಗಾರಿ ಸ್ಥಳದಲ್ಲಿ ಬುಧವಾರ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಎರಡು ಕಾರು ಜಖಂಗೊಂಡಿವೆ. ಬೆಂಗಳೂರಿನಿಂದ ಹೊಸೂರಿನತ್ತ ಬರುತ್ತಿದ್ದ ಲಾರಿಯೊಂದು ಏಕಾಏಕಿ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಮತ್ತೊಂದು ಕಾರಿಗೆ ಗುದ್ದಿದ್ದರಿಂದ ಎರಡೂ ಕಾರು ಜಖಂಗೊಂಡಿವೆ. ಅಪಘಾತದಿಂದ ಕೆಲ ಕಾಲ ವಾಹನ ದಟ್ಟಣೆ ಉಂಟಾಗಿತ್ತು. ಪೊಲೀಸರು ಕಾರುಗಳನ್ನು ಸ್ಥಳಾಂತರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruAnekalChandapura


