ಮಳೆಗೆ ರಸ್ತೆಗೆ ಬಿದ್ದ ಮರ, ಕಾರು ಜಖಂ; ಮನೆಗೂ ಹಾನಿ
ಕೆ.ಆರ್.ನಗರದಲ್ಲಿ ಶುಕ್ರವಾರ ರಾತ್ರಿ ಬಿದ್ದ ಮಳೆಗೆ ಹೆಬ್ಬಾಳು ಬಳಿ ಚುಂಚನಕಟ್ಟೆ ರಸ್ತೆಯಲ್ಲಿ ತೆರಳುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ಇಬ್ಬರೂ ಸಣ್ಣ ಪುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವುಗೊಳಿಸಿದರು. ತಾಲ್ಲೂಕಿನ ಕೆಸ್ತೂರು ಕೊಪ್ಪಲು ಗ್ರಾಮದಲ್ಲಿ ಪಾರ್ವತಮ್ಮ ಎಂಬುವವರ ಮನೆ ಮಳೆಯಿಂದ ಹಾನಿಯಾಗಿದೆ. ಮುಂದಿನ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಮೂಲ ವರದಿ: Prajavani
ಸಾರ್ವಜನಿಕ ಸುದ್ದಿ ಫೀಡ್ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruK.R. NagarHebbalTree FallAccident


