BLR Today
ಶುಕ್ರವಾರ, ನವೆಂಬರ್ 27, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿJalahalli6 ದಿನಗಳ ಹಿಂದೆ

ಜಾಲಹಳ್ಳಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

ಜಾಲಹಳ್ಳಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ
ಚಿತ್ರ: Prajavani

ಜಾಲಹಳ್ಳಿಯಲ್ಲಿ ಶುಕ್ರವಾರ ಟಿಪ್ಪು ಸುಲ್ತಾನ್ ಯುವಕ ಸಂಘಟನೆ ನೇತೃತ್ವದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದ ಬಳಿಯ ಟಿಪ್ಪುಸುಲ್ತಾನ್‌ ವೃತ್ತದಲ್ಲಿ ಭಾವಚಿತ್ರಕ್ಕೆ ಸಹಕಾರ ಸಂಘದ ಅಧ್ಯಕ್ಷ ಗೋವಿಂದಪ್ಪ ಹಲಗೇರಿ, ಉಪಾಧ್ಯಕ್ಷ ಖುರ್ಷಿದ್ ಪಟೇಲ, ಟಿಪ್ಪು ಸುಲ್ತಾನ್ ಸಂಘದ ಅಧ್ಯಕ್ಷ ಹೈದರ್‌ಸಾಬ್ ಮುಲ್ಲಾ, ಮುಸ್ಲಿಂ ಸಮಾಜದ ಹಿರಿಯ ಮುಖಂಡ ಹಾಜಿ ಖಾಜಾಹುಸೇನ್ ಬಾಂಬೆ ಹೂ ಮಾಲೆ ಹಾಕಿ ಜಯಂತಿ ಆಚರಿಸಿದರು. ಗ್ರಾ.ಪಂ ಮಾಜಿ ಅಧ್ಯಕ್ಷ ರಂಗಣ್ಣ ಕೋಲ್ಕಾರ, ಗ್ರಾ.ಪಂ ಸದಸ್ಯ ಅಬ್ದುಲ್ ರಹೇಮಾನ್ ಖುರೇಷಿ ಸೇರಿದಂತೆ ವಿವಿಧ ಪಕ್ಷದ ಮುಖಂಡರು ಮಾತನಾಡಿದರು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
JalahalliTipu SultanBengaluru