BLR Today
ಸೋಮವಾರ, ಅಕ್ಟೋಬರ್ 19, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿKR Market1 ಗಂಟೆಗಳ ಹಿಂದೆ

ಆಯುಧ ಪೂಜೆ ತಯಾರಿ ಖರೀದಿಗೆ ಮುಗಿಬಿದ್ದ ಜನ: ಕೆ.ಆರ್ ಮಾರುಕಟ್ಟೆಯಲ್ಲಿ ಫುಲ್ ರಷ್, ಟ್ರಾಫಿಕ್ ಜಾಮ್

ಆಯುಧ ಪೂಜೆ ತಯಾರಿ ಖರೀದಿಗೆ ಮುಗಿಬಿದ್ದ ಜನ: ಕೆ.ಆರ್ ಮಾರುಕಟ್ಟೆಯಲ್ಲಿ ಫುಲ್ ರಷ್, ಟ್ರಾಫಿಕ್ ಜಾಮ್
ಚಿತ್ರ: TV9 Kannada

ನಾಡಿನೆಲ್ಲೆಡೆ ಆಯುಧ ಪೂಜೆ ಹಬ್ಬದ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನ ಕೆ.ಆರ್. ಮಾರ್ಕೆಟ್‌ನಲ್ಲಿ ಪೂಜಾ ಸಾಮಗ್ರಿಗಳ ಖರೀದಿಗೆ ಜನಸಾಗರವೇ ಹರಿದುಬಂದಿದೆ. ಮಧ್ಯರಾತ್ರಿಯಿಂದಲೇ ಹಬ್ಬದ ಖರೀದಿ ಭರಾಟೆ ಶುರುವಾಗಿದ್ದು, ಸಾವಿರಾರು ಜನರು ವಿವಿಧ ಬಗೆಯ ಹೂವು, ಹಣ್ಣುಗಳು, ಬೂದುಗುಂಬಳಕಾಯಿ, ನಿಂಬೆಹಣ್ಣು, ಬಾಳೆಕಂದು, ತುಳಸಿ ಹಾರ ಸೇರಿದಂತೆ ಆಯುಧ ಪೂಜೆಗೆ ಅಗತ್ಯವಿರುವ ವಸ್ತುಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಭಾರಿ ಜನಸಂದಣಿಯಿಂದಾಗಿ ಕೆ.ಆರ್. ಮಾರುಕಟ್ಟೆ ಸುತ್ತಮುತ್ತ ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ವಾಹನ ಸವಾರರು ಗಂಟೆಗಟ್ಟಲೆ ರಸ್ತೆಯಲ್ಲಿ ಸಿಲುಕಿ ಪರದಾಡುತ್ತಿದ್ದಾರೆ.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruKR MarketAyudha PujaTraffic