BLR Today
ಗುರುವಾರ, ನವೆಂಬರ್ 5, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ರಾಜಕೀಯMajestic2 ಗಂಟೆಗಳ ಹಿಂದೆ

ಪ್ರತಿಭಟನೆ ವೇಳೆ ಎಳೆದಾಡಿದ ಪೊಲೀಸರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್

ಪ್ರತಿಭಟನೆ ವೇಳೆ ಎಳೆದಾಡಿದ ಪೊಲೀಸರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಚಿತ್ರ: TV9 Kannada

ರಾಜ್ಯ ಸರ್ಕಾರದ ಬಸ್ ದರ ಏರಿಕೆಯನ್ನು ಖಂಡಿಸಿ ಬಿಜೆಪಿ ನಾಯಕರು ನವೆಂಬರ್ 5 ರಂದು ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಇಬ್ಬರು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಮುಖವಾಡ ಧರಿಸಿ, ‘ದಿವಾಳಿ ಸರ್ಕಾರ’ ಎಂದು ಸಾಂಕೇತಿಕವಾಗಿ ಭಿಕ್ಷೆ ಬೇಡಿ ಗಮನ ಸೆಳೆದರು. ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ, ಈ ವೇಳೆ ವಿಧಾನಪರಿಷತ್ ಮುಖ್ಯ ಸಚೇತಕ ರವಿಕುಮಾರ್ ಅವರನ್ನು ಎಳೆದಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ರವಿ ಕುಮಾರ್ ರಸ್ತೆಯಲ್ಲೇ ಕುಳಿತು ಅಂಗಿ ಬಿಚ್ಚಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೂಲ ವರದಿ: TV9 Kannada ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruBJPProtestMajesticRavi Kumar