BLR Today
ಮಂಗಳವಾರ, ಸೆಪ್ಟೆಂಬರ್ 29, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಅಪರಾಧPeenya21 ಗಂಟೆಗಳ ಹಿಂದೆ

ಪೀಣ್ಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಗ್ಯಾಂಗ್‌ನಿಂದ ರೌಡಿಶೀಟರ್ ಬರ್ಬರ ಹತ್ಯೆ

ಪೀಣ್ಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಗ್ಯಾಂಗ್‌ನಿಂದ ರೌಡಿಶೀಟರ್ ಬರ್ಬರ ಹತ್ಯೆ
ಚಿತ್ರ: Public TV

ಪೀಣ್ಯದ ಗುಲ್ಬರ್ಗ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ರೌಡಿಶೀಟರ್‌ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ದೀಪಕ್ ಅಲಿಯಾಸ್‌ ದೀಪು ಕೊಲೆಯಾದ ರೌಡಿಶೀಟರ್. ಈತ ನಂದಿನಿ ಲೇಔಟ್ ರೌಡಿಶೀಟರ್ ಆಗಿದ್ದ. ಕಳೆದ ಎರಡು ದಿನಗಳ ಹಿಂದೆ ಎರಡು ಗುಂಪುಗಳ ನಡುವೆ ಗಲಾಟೆ ಆಗಿತ್ತು. ಇದೇ ಕಾರಣಕ್ಕೆ ಸೆ.27ರ ರಾತ್ರಿ ದೀಪಕ್ ಮೇಲೆ ದಾಳಿ ಮಾಡಿದ 7-8 ಜನರ ಗ್ಯಾಂಗ್‌ ದಾಳಿ ಮಾಡಿ ಹತ್ಯೆ ಮಾಡಿದೆ. ಈ ಸಂಬಂಧ ಪೀಣ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲ ವರದಿ: Public TV ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
BengaluruPeenyaCrimeViolence