BLR Today
ಸೋಮವಾರ, ನವೆಂಬರ್ 9, 2026ಬೆಂಗಳೂರಿನ ಸ್ಥಳೀಯ ಸುದ್ದಿ, ಬಡಾವಣೆಯಿಂದ ಬಡಾವಣೆಗೆ

ಹಬ್ಬದ ಸುದ್ದಿYelahanka3 ಗಂಟೆಗಳ ಹಿಂದೆ

ಯಲಹಂಕದಲ್ಲಿ ಗಣೇಶ ಮೂರ್ತಿಯ ವಿಸರ್ಜನೆ ಸಂಭ್ರಮದ ತೆರೆ

ಯಲಹಂಕದಲ್ಲಿ ಗಣೇಶ ಮೂರ್ತಿಯ ವಿಸರ್ಜನೆ ಸಂಭ್ರಮದ ತೆರೆ
ಚಿತ್ರ: Prajavani

ಹಳೇನಗರದ ಬಜಾರ್ ರಸ್ತೆಯಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಸೇವಾಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು 55 ದಿನಗಳ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ನಂತರ ವಿಸರ್ಜಿಸಲಾಯಿತು. ಕೇರಳದ ಕಲಾತಂಡ, ತಮಟೆ ವಾದನ, ಬೊಂಬೆಗಳ ಪ್ರದರ್ಶನ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಹಾಗೂ ವಾದ್ಯತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಯಲಹಂಕ ನಗರದ ರಾಜಬೀದಿಗಳಲ್ಲಿ ಸಂಭ್ರಮ ಹೆಚ್ಚಿಸಿದವು.

ಮೂಲ ವರದಿ: Prajavani ಸಾರ್ವಜನಿಕ ಸುದ್ದಿ ಫೀಡ್‌ನಿಂದ ಸತ್ಯಾಂಶ ಬದಲಿಸದೆ ಸಂಕ್ಷಿಪ್ತಗೊಳಿಸಲಾಗಿದೆ. ಪೂರ್ಣ ವರದಿಗೆ ಮೂಲ ಲಿಂಕ್ ನೋಡಿ.
Ganesh ChaturthiYelahankaBengaluruReligion